ಸಿಲಿಂಡರ್ ಸೋರಿಕೆ: ಕುಟುಂಬದ ಆರು ಮಂದಿ ಸಾವು
ಪಾಣಿಪತ್(ಹರ್ಯಾಣ):ಪಾಣಿಪತ್‌ನಲ್ಲಿ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ಉಂಟಾದ ಸ್ಫೋಟದಲ್ಲಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದಾರೆ.
ಮೃತರನ್ನು ಅಬ್ದುಲ್, 45, ಅವರ 40 ವರ್ಷದ ಪತ್ನಿ ಮತ್ತು ಅವರ ಇಬ್ಬರು ಪುತ್ರುಯರು ಹಾಗೂ ಇಬ್ಬರು ಪುತ್ರರು ಎಂದು ಪೊಲೀಸರು ತಿಳಿಸಿದ್ದಾರೆ.
ಪಾಣಿಪತ್ ಜಿಲ್ಲೆಯ ಬಿಚ್ಪರಿ ಗ್ರಾಮದ ಬಳಿಯ ತಹಸಿಲ್ ಕ್ಯಾಂಪ್ ಪ್ರದೇಶ ದಲ್ಲಿ ಈ ಕುಟುಂಬ ವಾಸವಿತ್ತು. ಇವರು ಪಶ್ಚಿಮ ಬಂಗಾಳದಿಂದ ವಲಸೆ ಬಂದವರಾಗಿದ್ದು, ಸಿಲಿಂಡರ್ ಸ್ಫೋಟದಿಂದ ಇಡೀ ಮನೆಗೆ ಬೆಂಕಿ ಹೊತ್ತಿಕೊಂಡಿದ್ದರ ಪರಿಣಾಮ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ಗಳು ತಿಳಿಸಿದ್ದಾರೆ.
ರಕ್ಷಣಾ ತಂಡ ಘಟನಾ ಸ್ಥಳಕ್ಕೆ ಬಂದು ನೋಡಿದಾಗ ಎಲ್ಲಾ ಮೃತದೇಹ ಗಳು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.