27 ರಂದು 6 ನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾ
ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 27 ರಂದು 6 ನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಾದ ನಡೆಸಲಿದ್ದಾರೆ.
ಕಾರ್ಯಕ್ರಮವು ನವದೆಹಲಿಯ ಟಾಲ್ಕಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯ ಲಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಪರೀಕ್ಷಾ ಪೇ ಚರ್ಚಾ ನೋಂದಣಿಗಳು ದುಪ್ಪಟ್ಟಾಗಿದೆ ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ.
ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ರಾಜ್ಯ ಮಂಡಳಿಗಳು, , ಕೇಂದ್ರೀಯ ವಿದ್ಯಾಲಯ ಸಂಘಟನೆ, ನವೋದಯ ವಿದ್ಯಾಲಯ ಸಮಿತಿ ಮತ್ತು ಇತರ ಮಂಡಳಿಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ್ದಾರೆ. 31 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು, 5 ಲಕ್ಷಕ್ಕೂ ಹೆಚ್ಚು ಶಿಕ್ಷಕರು ಮತ್ತು ಸುಮಾರು 2 ಲಕ್ಷ ಪೋಷಕರು ಪರೀಕ್ಷಾ ಪರ್ ಚರ್ಚಾಗೆ ನೋಂದಾಯಿಸಿ ಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
150 ದೇಶಗಳ ವಿದ್ಯಾರ್ಥಿಗಳು, 51 ದೇಶಗಳ ಶಿಕ್ಷಕರು ಮತ್ತು 50 ದೇಶಗಳ ಪೋಷಕರು ಸಹ ಕಾರ್ಯಕ್ರಮಕ್ಕೆ ನೋಂದಾಯಿಸಿ ಕೊಂಡಿದ್ದಾರೆ.
ಭಾಗವಹಿಸುವವರನ್ನು ಆಯ್ಕೆ ಮಾಡಲು 2022 ರ ನವೆಂಬರ್ 25 ಮತ್ತು ಡಿಸೆಂಬರ್ 30 ರ ನಡುವೆ ವಿವಿಧ ವಿಷಯಗಳ ಕುರಿತು ಆನ್‌ಲೈನ್ ಸೃಜನಶೀಲ ಬರವಣಿಗೆ ಸ್ಪರ್ಧೆಯನ್ನು ನಡೆಸಲಾಯಿತು.