ಗುಜರಾತ್​: ಕೊನೆಯ ಹಂತದ ಮತದಾನ ಇಂದು
ಇಂದಿನ ಚುನಾವಣೆಯಲ್ಲಿ ಮತದಾರರು ಎಷ್ಟರಮಟ್ಟಿಗೆ ಪಾಲ್ಗೊಳ್ಳಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
93 ಸೀಟುಗಳಲ್ಲಿ ಬಿಜೆಪಿ, ಕಾಂಗ್ರೆಸ್​, ಆಪ್​ ಸೇರಿದಂತೆ 61 ಪಕ್ಷಗಳ 833 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇದರಲ್ಲಿ 285 ಸ್ವತಂತ್ರ ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಸಜ್ಜಾಗಿದ್ದಾರೆ. ಕಳೆದ ಸಲ ಇಷ್ಟು ಕ್ಷೇತ್ರಗಳಲ್ಲಿ 51 ಸ್ಥಾನಗಳನ್ನು ಬಿಜೆಪಿ, 39 ಕಾಂಗ್ರೆಸ್​, 3 ಕ್ಷೇತ್ರಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಇಂದಿನ ಮತದಾನದಲ್ಲಿ ಪ್ರಧಾನಿ ಮೋದಿ ಅವರು ಅಹಮದಾ ಬಾದ್​ನ ಸಾಬರಮತಿ ಕ್ಷೇತ್ರದ ರಾಣಿಪ್​ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ.
ಇದಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ. ಗೃಹ ಸಚಿವ ಅಮಿತ್​ ಶಾ ಅವರೂ ಮತದಾನದಲ್ಲಿ ಭಾಗಿಯಾಗಲಿದ್ದು, ನಾರನ್​ಪುರ ಬೂತ್​ನಲ್ಲಿ ಅವರು ಮತದಾನ ಮಾಡಲಿದ್ದಾರೆನೆಂದು ಹೇಳಿದ್ದಾರೆ.