215 ಹೊಸ ಕರೋನಾ ಪ್ರಕರಣ ಪತ್ತೆ
ಕೋವಿಡ್ ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,615ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗು ತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,982ಕ್ಕೆ ಇಳಿಕೆಯಾಗಿದೆ. ಇನ್ನು ಭಾರತದಲ್ಲಿ ಒಂದೇ 2,66,442 ಮಂದಿ ಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 90,58,68,872 ಮಂದಿಯನ್ನು ಪರೀಕ್ಷೆಗೊಳ ಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,19,91,45,842 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.