1,321 ಜನರಲ್ಲಿ ಹೊಸದಾಗಿ ಕರೋನಾ ಸೋಂಕು ಪತ್ತೆ
ನವದೆಹಲಿ:ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾ ಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,321 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ ಯಾಗಿದೆ.
ದೇಶದಲ್ಲಿ ಒಂದೇ ದಿನ 9 ಜನ ಮಹಾಮಾರಿ ಕೋವಿಡ್ ಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 5,30,461 ಜನರು ಕೋವಿಡ್ ನಿಂದ ಮೃತಪಟ್ಟಿದ್ದಾರೆ.
ದೇಶದಲ್ಲಿ 16,098 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.77ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶ ದಲ್ಲಿ ಈವರೆಗೆ 4,41,10,590 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ದೇಶದಲ್ಲಿ ಈವರೆಗೆ 2,19,67,80,694 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,64,629 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.