1,046 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ
ನವದೆಹಲಿ:ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,046 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಒಂದೇ ದಿನದಲ್ಲಿ ಕೋವಿಡ್ ಮಹಾಮಾರಿಗೆ 53 ಜನರು ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಈವರೆಗೆ 5,29,024 ಜನರು ಕೋವಿಡ್ ನಿಂದ ಮೃತಪಟ್ಟಿದ್ದಾರೆ.
ದೇಶದಲ್ಲಿ 17,912 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.77ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,06,656 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ದೇಶದಲ್ಲಿ ಈವರೆಗೆ 2,19,64,92,268 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,27,126 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.