 : ಒಂದು ರಾಷ್ಟ್ರ, ಒಂದು ಚುನಾವಣೆ ಬಿಜೆಪಿ ರಾಜಕೀಯ ಲಾಭದ ನಿರ್ಧಾರ; ಶಿವಕುಮಾರ್ ಆರೋಪ
ದೆಹಲಿ:ಒಂದು ರಾಷ್ಟ್ರ, ಒಂದು ಚುನಾವಣೆ (   ) ಬಿಜೆಪಿಯವರ () ರಾಜಕೀಯ ನಿರ್ಧಾರ. ದೇಶದ ಹಿತಾಸಕ್ತಿಯ ದೃಷ್ಟಿಯಿಂದ ಮತ್ತು ಪ್ರಾಯೋಗಿಕವಾಗಿ ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ( ) ಹೇಳಿದರು. ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಗುರುವಾರ ಅವರು ಮಾತನಾಡಿದರು.
ಈ ಸುದ್ದಿಯನ್ನೂ ಓದಿ |  : 42 ಅಸಿಸ್ಟೆಂಟ್‌ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಮಾಹಿತಿ ಇಲ್ಲಿದೆ
ಈ ಹಿಂದೆಯೇ ಈ ಪ್ರಸ್ತಾವನೆ ಇತ್ತಾದರೂ, ಸ್ಥಳೀಯ ಒಕ್ಕೂಟ ವ್ಯವಸ್ಥೆಯಲ್ಲಿ ಯಾವುದೇ ಸರ್ಕಾರವನ್ನೂ ಅವಧಿ ಮುಗಿಯುವವರೆಗೂ ಮುಂದುವರೆಸಿ ಎಂದು ಯಾರನ್ನೂ ಬಲವಂತ ಮಾಡಲು ಸಾಧ್ಯವಿಲ್ಲ. ಮುಂದೆ ಏನಾಗುತ್ತದೆ ಎಂದು ಕಾದು ನೋಡೋಣ ಎಂದರು.
ಈ ಸುದ್ದಿಯನ್ನೂ ಓದಿ | : ಟೆಲಿಕಾಂ ಕಂಪನಿಗಳಿಗೆ ಹಿನ್ನಡೆ; ಎಜಿಆರ್‌ ಮರು ಲೆಕ್ಕಾಚಾರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌
ಕಾಂಗ್ರೆಸ್ ಪಕ್ಷವು ಈ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಈ ಸಂದರ್ಭದಲ್ಲಿ ತಿಳಿಸಿದರು.