2,000 ಕೋವಿಡ್ ಪ್ರಕರಣ ದೃಢ
ನವದೆಹಲಿ:ದೇಶದಾದ್ಯಂತ ಗುರುವಾರ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 2,000 ಕೋವಿಡ್ ಪ್ರಕರಣಗಳು ವರದಿ ಯಾಗಿದ್ದು, 20 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 25,510ಕ್ಕೆ ಇಳಿಕೆಯಾಗಿದೆ. ಕಳೆದೊಂದು ದಿನದಲ್ಲಿ 2,579 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,40,82,064 ಮಂದಿ ಗುಣಮುಖರಾಗಿದ್ದಾರೆ.
ದೇಶದಲ್ಲಿ ಇದುವರೆಗೆ 4,46,36,517 ಮಂದಿಗೆ ಸೋಂಕು ತಗುಲಿದ್ದು, ಒಟ್ಟು 5,28,943 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ದೇಶದಲ್ಲಿ ಈವರೆಗೆ 89.94 ಕೋಟಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 219.46 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.