2,768 ಕೋವಿಡ್ ಹೊಸ ಪ್ರಕರಣ ದೃಢ
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,768 ಕೋವಿಡ್ ಹೊಸ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಇದೇ ಅವಧಿಯಲ್ಲಿ 17 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ದೇಶದಲ್ಲಿ ಈಗ 33,318 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಕೋವಿಡ್ ಸಂಬಂಧಿತ ಸಾವಿನ ಸಂಖ್ಯೆ 5,28,733ಕ್ಕೆ ತಲುಪಿದೆ.
ಮಂಗಳವಾರ 1,968 ಕೋವಿಡ್ ಪ್ರಕರಣ ದಾಖಲಾಗಿತ್ತು. ಒಟ್ಟಾರೆಯಾಗಿ ಭಾರತದಲ್ಲಿ ಈವರೆಗೆ 218 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.