4,777 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ
ನವದೆಹಲಿ:ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿತಗೊಂಡಿದೆ.
ಕಳೆದ 24 ಗಂಟೆಯಲ್ಲಿ 4,777 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,510 ಜನರು ಕೋವಿಡ್ ನಿಂದ ಮೃತಪಟ್ಟಿದ್ದಾರೆ.
ದೇಶದಲ್ಲಿ 43,994 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.72ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶ ದಲ್ಲಿ ಈವರೆಗೆ 4,39,95,610 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ದೇಶದಲ್ಲಿ ಈವರೆಗೆ 2,17,56,67,942 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,02,283 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.