ರಾಮ ಜನ್ಮಭೂಮಿ ಆಂದೋಲನದ ಆಚಾರ್ಯ ಧರ್ಮೇಂದ್ರ ವಿಧಿವಶ
ರಾಜಸ್ಥಾನ:ರಾಮ ಜನ್ಮಭೂಮಿ ಆಂದೋಲನದ ಪ್ರಮುಖ ನಾಯಕ ಆಚಾರ್ಯ ಧರ್ಮೇಂದ್ರ( ಅವರು ಇಂದು ರಾಜಸ್ಥಾನದ ಜೈಪುರ ಸವಾಯಿ ಮಾನ್ಸಿಂಗ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಆಚಾರ್ಯ ಸ್ವಾಮಿ ಧರ್ಮೇಂದ್ರ ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೊಳಗಾಗಿದ್ದ ಅವರನ್ನು ಚಿಕಿತ್ಸೆಗಾಗಿ ಸವಾಯಿ ಮಾನ್‌ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕಳೆದ ಒಂದು ತಿಂಗಳಿನಿಂದ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ವಿಶ್ವ ಹಿಂದೂ ಪರಿಷತ್ತಿನ ಮಾರ್ಗದರ್ಶಕ ಮಂಡಳಿಯಲ್ಲಿದ್ದ ಇವರು ರಾಮಜನ್ಮ ಭೂಮಿ ಆಂದೋಲನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಬಾಬರಿ ಧ್ವಂಸ ಪ್ರಕರಣದಲ್ಲಿ ಎಲ್ಲಾ 32 ಆರೋಪಿಗಳನ್ನು ವಿಶೇಷ ಸಿಬಿಐ ನ್ಯಾಯಾಲಯವು ಖುಲಾಸೆಗೊಳಿಸಿ ದಾಗ, ಅವರು ಸಂತೋಷ ವ್ಯಕ್ತಪಡಿಸಿದ್ದರು.