 : ಒಂದು ರಾಷ್ಟ್ರ, ಒಂದು ಚುನಾವಣೆಗೆ ಜೆಡಿಎಸ್ ಸ್ವಾಗತ; ಇದು ಪ್ರಧಾನಿ ಮೋದಿಯವರ ಐತಿಹಾಸಿಕ ನಿರ್ಧಾರ ಎಂದ ಎಚ್‌.ಡಿ.ಕೆ
ನವದೆಹಲಿ:ಒಂದು ರಾಷ್ಟ್ರ, ಒಂದು ಚುನಾವಣೆ ಭಾರತೀಯ ಚುನಾವಣಾ ವ್ಯವಸ್ಥೆ ಸುಧಾರಣೆಗೆ ಪ್ರಧಾನಿ ನರೇಂದ್ರ ಮೋದಿ (  ) ಅವರು ಇರಿಸಿರುವ ಐತಿಹಾಸಿಕ ಹೆಜ್ಜೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ( ) ತಿಳಿಸಿದ್ದಾರೆ. ಒಂದು ರಾಷ್ಟ್ರ, ಒಂದು ಚುನಾವಣೆ ಭಾರತೀಯ ಚುನಾವಣಾ ವ್ಯವಸ್ಥೆಯನ್ನು ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷ ( ) ಸ್ವಾಗತಿಸುತ್ತದೆ ಎಂದು ಸಚಿವರು ಇದೇ ವೇಳೆ ತಿಳಿಸಿದರು.  ನವದೆಹಲಿಯ ಭಾರತ್ ಮಂಟಪದಲ್ಲಿ ಭಾರೀ ಕೈಗಾರಿಕೆ ಸಚಿವಾಲಯ ಹಮ್ಮಿಕೊಂಡಿದ್ದ ಎಲೆಕ್ಟ್ರಿಕ್ ವಾಹನಗಳ ಕುರಿತ ಸಭೆಯಲ್ಲಿ ಪಾಲ್ಗೊಂಡ ನಂತರ ಸಚಿವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಈ ಸುದ್ದಿಯನ್ನೂ ಓದಿ | : ಹೆಚ್ಚಿನ ಆಮದು ಸುಂಕ ಹೇರುವ ಮೂಲಕ ಚೀನಾ ಉಕ್ಕಿಗೆ ಕಡಿವಾಣ
ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಬಗ್ಗೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಸಮಿತಿ ವರದಿ ನೀಡಿದೆ. ಈ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದರು.
ಈ ಸುದ್ದಿಯನ್ನೂ ಓದಿ |  2: ಜಿಯೊದಿಂದ ಹಳೇ ಮಾಡೆಲ್‌ನಲ್ಲೇ ಸ್ಮಾರ್ಟ್‌ ಫೋನ್‌! ದರ ಕೇವಲ 2799 ರೂ!
ನರೇಂದ್ರ ಮೋದಿ ಅವರ ಸರ್ಕಾರ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದಂತೆಯೇ ಸಂಪುಟವು ಈ ಐತಿಹಾಸಿಕ ನಿರ್ಧಾರ ಕೈಗೊಂಡಿದೆ ಎಂದು ಅವರು ಹೇಳಿದರು.