5,108 ಕೋವಿಡ್ ಪ್ರಕರಣಗಳು ದೃಢ
ನವದೆಹಲಿ:ದೇಶದಾದ್ಯಂತ ಬುಧವಾರ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 5,108 ಕೋವಿಡ್ ಪ್ರಕರಣಗಳು ವರದಿ ಯಾಗಿದ್ದು, 19 ಮಂದಿ ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 45,749ಕ್ಕೆ ಇಳಿಕೆಯಾಗಿದೆ.
ಕಳೆದೊಂದು ದಿನದಲ್ಲಿ 5,675 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,39,36,092 ಮಂದಿ ಗುಣಮುಖರಾಗಿದ್ದಾರೆ.
ದೇಶದಲ್ಲಿ ಇದುವರೆಗೆ 4,45,10,057 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 52,82,16 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಒಟ್ಟು ಸೋಂಕಿತರ ಪೈಕಿ ಶೇ 0.10 ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.71 ಆಗಿದೆ.
ದೇಶದಲ್ಲಿ ಈವರೆಗೆ 89.02 ಕೋಟಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 215.67 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸ ಲಾಗಿದೆ.