5,221 ಕೋವಿಡ್ ಪ್ರಕರಣ ದೃಢ
ನವದೆಹಲಿ:ದೇಶದಾದ್ಯಂತ ಸೋಮವಾರ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 5,221 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 15 ಮಂದಿ ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 47,176ಕ್ಕೆ ಇಳಿಕೆಯಾಗಿದೆ.
ಕಳೆದೊಂದು ದಿನದಲ್ಲಿ 5,975 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,39,25,239 ಮಂದಿ ಗುಣಮುಖರಾಗಿದ್ದಾರೆ.
ದೇಶದಲ್ಲಿ ಇದುವರೆಗೆ 4,45,00,580 ಮಂದಿಗೆ ಸೋಂಕು ತಗುಲಿದ್ದು, ಒಟ್ಟು 5,28,165 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ದೇಶದಲ್ಲಿ ಈವರೆಗೆ 88.95 ಕೋಟಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 215.26 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.