6,395 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ
ನವದೆಹಲಿ:ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಮತ್ತೆ ಏರಿಕೆಯಾಗುತ್ತಿದೆ.
ಕಳೆದ 24 ಗಂಟೆಯಲ್ಲಿ 6,395 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,090 ಜನರು ಕೋವಿಡ್ ನಿಂದ ಮೃತಪಟ್ಟದ್ದಾರೆ.
ದೇಶದಲ್ಲಿ 50,342 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.68ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 6,032 ಜನರು ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,39,00204 ಜನರು ಕೋವಿಡ್ ನಿಂದ ಗುಣಮುಖ ರಾಗಿದ್ದಾರೆ.
ದೇಶದಲ್ಲಿ ಈವರೆಗೆ 2,14,27,81,911 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,25,602 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.