ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆದವರ ಸೇವಾವಧಿ ವಿಸ್ತರಣೆ ಇಲ್ಲ
ನವದೆಹಲಿ :ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆದವರ ಸೇವಾ ಅವಧಿಯನ್ನು ವಿಸ್ತರಣೆ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.
ಮರಣ ಹೊಂದಿದ ಉದ್ಯೋಗಿಯ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ಗಮನಿಸಿ ಕುಟುಂಬದಲ್ಲಿ ಒಬ್ಬರಿಗೆ ನೀಡುವ ಅನುಕಂಪದ ಉದ್ಯೋಗದ ಸೇವಾ ಅವಧಿ ವಿಸ್ತರಣೆ ಮಾಡಿದರೆ ಅದು ಸಂವಿಧಾನದ 14 ಮತ್ತು 15 ನೇ ವಿಧಿಗಳ ಉಲ್ಲಂಘನೆ ಆಗುತ್ತದೆ ಎಂದು ಸುಪ್ರೀಂ ನ್ಯಾಯಮೂರ್ತಿಗಳಾದ ಎಂ.ಆರ್. ಷಾ ಮತ್ತು ಬಿ.ವಿ. ನಾಗರತ್ನ ಅವರ ಪೀಠ ಅಭಿಪ್ರಾಯಪಟ್ಟಿದೆ.
ಸಂವಿಧಾನದ 14 ಮತ್ತು 15 ನೇ ವಿಧಿಗಳ ಉಲ್ಲಂಘನೆ ಜೊತೆಗೆ ಹೊಸ ನೇಮಕಾತಿಗೆ ಇದರಿಂದ ಅಡಚಣೆ ಆಗುತ್ತದೆ ನ್ಯಾಯಪೀಠ ಹೇಳಿದೆ.
