4,417 ಕೋವಿಡ್ 19 ಸೋಂಕು ಪ್ರಕರಣ ಪತ್ತೆ
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 4,417 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದೆ. ಕಳೆದ ಮೂರು ತಿಂಗಳಲ್ಲಿ ದಾಖಲಾದ ಕನಿಷ್ಠ ಪ್ರಕರಣವಾಗಿದೆ.
ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,44,66,862ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 52,336ಕ್ಕೆ ಇಳಿಕೆಯಾಗಿದೆ.
ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.69ರಷ್ಟಿದೆ. ಒಂದೇ ದಿನದಲ್ಲಿ 1,638 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.1.20ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.2.06ರಷ್ಟಿದೆ.
ದೇಶಾದ್ಯಂತ ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,38,86,496ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಈವರೆಗೆ 213.72 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.