ರಾಷ್ಟ್ರಪತಿಯವರಿಂದ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಇಂದು
ನವದೆಹಲಿ :ಶಿಕ್ಷಕರ ದಿನವಾದ ಸೋಮವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಿಕ್ಷಕರಿಗೆ 2022 ರ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.
ಈ ವರ್ಷ ದೇಶದ ವಿವಿಧ ಭಾಗಗಳಿಂದ 46 ಶಿಕ್ಷಕರನ್ನು ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಶಿಕ್ಷಕರು ಹಿಮಾಚಲ ಪ್ರದೇಶ, ಹರಿಯಾಣ, ಪಂಜಾಬ್, ಮಹಾರಾಷ್ಟ್ರ ಮತ್ತು ತೆಲಂಗಾಣ ಇತರ ಪ್ರದೇಶ ಗಳಿಂದ ಬಂದವರು.
ದೆಹಲಿಯ ವಿಜ್ಞಾನ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶಿಕ್ಷಣ ಸಚಿವಾಲಯದ ದೂರದರ್ಶನ ಮತ್ತು ಸ್ವಯಂ ಪ್ರಭಾ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದೆ.
ಕೇಂದ್ರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿರುವರು.