7,219 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ
ನವದೆಹಲಿ:ದೇಶಾದ್ಯಂತ ಕರೋನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 7,219 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕೋವಿಡ್ ಮಹಾಮಾರಿಗೆ ದೇಶದಲ್ಲಿ ಈವರೆಗೆ 5,27,965 ಜನರು ಮೃತಪಟ್ಟಿದ್ದಾರೆ.
ದೇಶದಲ್ಲಿ 56,745 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.68ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,38,65,016 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ದೇಶದಲ್ಲಿ ಈವರೆಗೆ 2,13,01,07,236 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,64,886 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.