ಲಿಖಿತ ಪರೀಕ್ಷೆ: 27 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಸ್ಥಗಿತ
ಗುವಾಹಟಿ:ರಾಜ್ಯ ಸರ್ಕಾರದ ಇಲಾಖೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯಲ್ಲಿ ಸಂಭವಿಸಬಹುದಾದ ದುಷ್ಕೃತ್ಯಗಳನ್ನು ತಡೆಗಟ್ಟಲು ಅಸ್ಸಾಂನ 27 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ನಾಲ್ಕು ಗಂಟೆಗಳ ಕಾಲ ಸ್ಥಗಿತಗೊಳಿಸ ಲಾಯಿತು.
ಆಡಳಿತ ಆದೇಶದ ವಿರುದ್ಧ ಗೌಹಾಟಿ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿತ್ತು. ಆದರೆ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿತು.
ಪರೀಕ್ಷೆಗಳು ನಡೆಯುತ್ತಿರುವ ಎಲ್ಲಾ 27 ಜಿಲ್ಲೆಗಳಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಸಹ ವಿಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳ ಸುಮಾರು 30,000 ಗ್ರೇಡ್- ಮತ್ತು - ಹುದ್ದೆಗಳ ನೇಮಕಾತಿಗೆ 14.30 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗುವ ನಿರೀಕ್ಷೆಯಿದೆ.