‘ಭಾರತ್ ಜೋಡೋ ಯಾತ್ರೆ’ಯ ಲೋಗೋ, ಘೋಷಣೆ, ಭಿತ್ತಿಪತ್ರ ಬಿಡುಗಡೆ
ನವದೆಹಲಿ:ಸೆಪ್ಟೆಂಬರ್ 7 ರಿಂದ ಆರಂಭವಾಗಲಿರುವ ‘ಭಾರತ್ ಜೋಡೋ ಯಾತ್ರೆ’ಯ ಲೋಗೋ, ಘೋಷಣೆ ಹಾಗೂಭಿತ್ತಿಪತ್ರವನ್ನು ಕಾಂಗ್ರೆಸ್ ಪಕ್ಷ ಮಂಗಳವಾರ ಬಿಡುಗಡೆ ಮಾಡಿದೆ.
ಪಕ್ಷದ ಕೇಂದ್ರ ಕಚೇರಿಯಲ್ಲಿ ಜೈರಾಮ್ ರಮೇಶ್, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡರು. ನಂತರ ಮಾತನಾಡಿದ ಜೈ ರಾಮ್ ರಮೇಶ್, ಈ ಸಂಬಂಧ ವೆಬ್ ಸೈಟ್ ಅನ್ನು ಕೂಡಾ ಬಿಡುಗಡೆ ಗೊಳಿಸಲಾಗಿದೆ ಎಂದು ತಿಳಿಸಿದರು.
12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ ಮೂಲಕ ಈ ಯಾತ್ರೆ ನಡೆಯಲಿದ್ದು, ನಾಗರಿಕ ಸಮಾಜ ಸಂಸ್ಥೆಗಳು ಮತ್ತು ಸಮಾನ ಮನಸ್ಕರು ಈ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.