ಗುಜರಾತ್ ಚುನಾವಣೆ: ಎಎಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟ
ಗಾಂಧಿನಗರ:ಈ ವರ್ಷ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ.
ಒಟ್ಟು ಒಂಬತ್ತು ಅಭ್ಯರ್ಥಿಗಳನ್ನು ಎಎಪಿಯು ಈಗಲೇ ಚುನಾವಣೆ ಕಣಕ್ಕೆ ಇಳಿಸಿದೆ.
ಆ. 2ರಂದು ಎಎಪಿ 10 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿತ್ತು. 182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ 2022ರ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ.