18,738 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ
ನವದೆಹಲಿ:ದೇಶದಲ್ಲಿ ಕರೋನಾ ಸೊಂಕಿತರ ಸಂಖ್ಯೆ ಇನ್ನಷ್ಟು ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ 18,738 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 5,26,689ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 1,34,933 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.50ರಷ್ಟು ಜನ ಕೋವಿಡ್ ನಿಂದ ಗುಣ ಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,34,84,110 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ದೇಶದಲ್ಲಿ ಈವರೆಗೆ 2,06,21,79,411 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,72,910 ಜನರಿಗೆ ಕೋವಿಡ್ ಟೆಸ್ಟ್ ಮಾಡ ಲಾಗಿದೆ.