19,406 ಕೋವಿಡ್ 19 ಸೋಂಕು ಪ್ರಕರಣ ದೃಢ
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 19,406 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದೆ.
ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,41,26,994ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆಗೊಳಿಸಿದೆ.
ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,34,793ಕ್ಕೆ ಇಳಿಕೆಯಾಗಿದೆ. ಕೋವಿಡ್ 19 ಸೋಂಕಿನಿಂದ 49 ಮಂದಿ ಮೃತಪಟ್ಟಿದ್ದು, ಭಾರತದಲ್ಲಿ ಕೋವಿಡ್ ಸೋಂಕಿನಿಂದ ಮೃತಪಡುವವರ ಸಂಖ್ಯೆ 5,26,649ಕ್ಕೆ ತಲುಪಿದೆ.
24 ಗಂಟೆಯಲ್ಲಿ 571 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ 19,928 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
