19,893 ಕೋವಿಡ್ 19 ಸೋಂಕು ಪ್ರಕರಣ ದೃಢ
ನವದೆಹಲಿ:ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 19,893 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದೆ.
ಇದರೊಂದಿಗೆ ದೇಶಾದ್ಯಂತ ಪ್ರಕರಣಗಳ ಒಟ್ಟು ಸಂಖ್ಯೆ 4,40,87,037ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,36,478ಕ್ಕೆ ಇಳಿಕೆಯಾಗಿದೆ. ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 5,26,530ಕ್ಕೆ ತಲುಪಿದೆ. 24ಗಂಟೆಯಲ್ಲಿ ಕೋವಿಡ್ ನಿಂದ 53 ಮಂದಿ ಮೃತಪಟ್ಟಿದೆ.
ಒಂದೇ ದಿನದಲ್ಲಿ 579 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. 24ಗಂಟೆಯಲ್ಲಿ 20,419 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರ ಸಂಖ್ಯೆ 4,34,24,029ಕ್ಕೆ ಏರಿಕೆ ಯಾಗಿದೆ ಎಂದು ಅಂಕಿಅಂಶ ವಿವರಿಸಿದೆ.
