17,135 ಜನರಲ್ಲಿ ಹೊಸ ಸೋಂಕು ಪತ್ತೆ
ನವದೆಹಲಿ:ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 17,135 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಕಳೆದ 24 ಗಂಟೆಗಳಲ್ಲಿ 47 ಮಂದಿ ಮೃತಪಟ್ಟಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,477 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1,37,057 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.49ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,34,03,610 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ದೇಶದಲ್ಲಿ ಈವರೆಗೆ 2,04,84,30,732 ಡೋಸ್ ಲಸಿಕೆ ಹಾಕಲಾಗಿದೆ.