14,830 ಕೋವಿಡ್ ಪ್ರಕರಣ ಪತ್ತೆ: ಶೇ 12ರಷ್ಟು ಇಳಿಕೆ
ನವದೆಹಲಿ: ದೇಶದಲ್ಲಿ ಕೋವಿಡ್ ದೃಢ ಪ್ರಮಾಣದಲ್ಲಿ ಇಳಿಕೆ ಕಂಡಿದೆ. 24 ಗಂಟೆಗಳಲ್ಲಿ 14,830 ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಸೋಮವಾರ 16,866 ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. ಇಂದು ಶೇ 12ರಷ್ಟು ಇಳಿಕೆ ಕಂಡುಬಂದಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆಯೂ 1,47,512ಕ್ಕೆ ಇಳಿಕೆಯಾಗಿದೆ.
ಇದೇ ಅವಧಿಯಲ್ಲಿ 36 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,26,110ಕ್ಕೆ ಏರಿದೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇಕಡ 98.47 ರಷ್ಟಿದೆ.