16,866 ಕೋವಿಡ್ 19 ಸೋಂಕು ಪ್ರಕರಣ ದೃಢ
ನವದೆಹಲಿ:ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 16,866 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದೆ.
ದೇಶಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಒಟ್ಟು 4,38,05,621ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,50,877ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ 41 ಮಂದಿ ಕೋವಿಡ್ ನಿಂದ ಮೃತಪಟ್ಟಿದ್ದು, ಇದರೊಂದಿಗೆ ಈವರೆಗೆ ಕೋವಿಡ್ ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,26,074ಕ್ಕೆ ತಲುಪಿದೆ.
ಒಂದು ದಿನದಲ್ಲಿ 1,323 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ.
