20,279 ಹೊಸ ಕರೋನಾ ಪ್ರಕರಣ ಪತ್ತೆ
ನವದೆಹಲಿ:ದೇಶದಲ್ಲಿ ಕರೋನಾ ಏರಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 20,279 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 4,38,88,755ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ 36 ಮಂದಿ ಮೃತಪಟ್ಟಿದ್ದಾರೆ. ಒಟ್ಟಾರೇ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,26,033ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ 2, 100 ಕೇಸ್ ಗಳು ಏರಿಕೆಯಾಗಿವೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 1,52,200ಕ್ಕೆ ಏರಿಕೆಯಾಗಿದೆ. ಇಲ್ಲಿವರೆಗೂ 2, 01, 99,33,45 ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.