21,566 ಕೋವಿಡ್ 19 ಸೋಂಕು ಪ್ರಕರಣ ದೃಢ
ನವದೆಹಲಿ:ಕಳೆದ 24ಗಂಟೆಯಲ್ಲಿ ಭಾರತದಲ್ಲಿ 21,566 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದೆ. 45 ಜನರು ಮೃತ ಪಟ್ಟಿದ್ದಾರೆ. ದೇಶಾದ್ಯಂತ ಕೋವಿಡ್ ನಿಂದ ಈವರೆಗೆ 5,25,870ಕ್ಕೆ ಏರಿಕೆಯಾಗಿದೆ.
ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,48,882ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಕೋವಿಡ್ 19 ಸೋಂಕಿನಿಂದ ಗುಣಮುಖ ರಾದವರ ಒಟ್ಟು ಸಂಖ್ಯೆ 4,31,50,434ಕ್ಕೆ ಹೆಚ್ಚಳವಾಗಿದೆ.
24 ಗಂಟೆಯಲ್ಲಿ 3,227 ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ದೇಶಾದ್ಯಂತ ಕೋವಿಡ್ ಲಸಿಕೆ ಅಭಿಯಾನದಡಿ ಈವರೆಗೆ 200.91 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
