18,517 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ
ನವದೆಹಲಿ:ದೇಶದಲ್ಲಿ ಕಳೆದ ಎರಡು ದಿನಗಳಿಂದ ಕರೋನಾ ಸೊಂಕಿತರ ಸಂಖ್ಯೆ ಕುಸಿತ ಕಂಡಿತ್ತು. ಆದರೆ ಮತ್ತೆ ದಿಢೀರ್ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 18,517 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
24 ಗಂಟೆಯಲ್ಲಿ 40 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 5,28,388 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 1,43,091 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 18,517 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,31,32,140 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ದೇಶದಲ್ಲಿ ಈವರೆಗೆ 2,00,61,24,684 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,98,034 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.