 : ದೆಹಲಿ ನೂತನ ಸಿಎಂ ಆಗಿ ಆತಿಶಿ ಮರ್ಲೇನಾ ಆಯ್ಕೆ
ನವದೆಹಲಿ: ಆಮ್‌ ಆದ್ಮಿ ಪಾರ್ಟಿ (  ) ನಾಯಕಿ, ಸಚಿವೆ ಆತಿಶಿ ಮರ್ಲೇನಾ( ) ದೆಹಲಿಯ ನೂತನ ಸಿಎಂ ಆಗಿ ಆಯ್ಕೆ ಆಗಿದ್ದಾರೆ ಎನ್ನಲಾಗಿದೆ. ಸಿಎಂ ಅರವಿಂದ ಕೇಜ್ರಿವಾಲ್‌ ರಾಜೀನಾಮೆಯಿಂದ ತೆರವುಗೊಂಡಿರುವ ಸ್ಥಾನಕ್ಕೆ ಇಂದು ಪಕ್ಷದ ಶಾಸಕಾಂಗ ಸಭೆಯಲ್ಲಿ ಆತಿಶಿ ಹೆಸರನ್ನು ಸೂಚಿಸಲಾಗಿದ್ದು, ಅವರು ಇಂದೇ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಇನ್ನು ಈ ಬಗ್ಗೆ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.
               .            :  ../65VPmPpA39
ಇಂದು ಮುಖ್ಯಮಂತ್ರಿ ನಿವಾಸದ ನಡೆದ ಶಾಸಕಾಂಗ ಸಭೆಯಲ್ಲಿ ನೂತನ ಸಿಎಂ ಆಯ್ಕೆ ಬಗ್ಗೆ ಮಹತ್ವದ ಚರ್ಚೆ ನಡೆದಿತ್ತು. ಕೇಜ್ರಿವಾಲ್‌ ರಾಜೀನಾಮೆ ನಂತರ  ಅವರ ಸ್ಥಾನವನ್ನು ಯಾರು ತುಂಬುತ್ತಾರೆ ಎಂಬ ಚರ್ಚೆ ಭುಗಿಲೆದ್ದಿತ್ತು. ಅಲ್ಲದೇ ಹಲವು ಪ್ರಮುಖರ ಹೆಸರು ಕೇಳಿ ಬಂದಿತ್ತು. ಸಭೆಯಲ್ಲಿ ಕೊನೆಗೆ  ಕೇಜ್ರಿವಾಲ್‌ ಅವರು ತಮ್ಮ ಉತ್ತರಾಧಿಕಾರಿಯಾಗಿ ಆತಿಶಿ ಹೆಸರನ್ನು ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ. ಇನ್ನು ಸಿಎಂ ಕೇಜ್ರಿವಾಲ್‌ ಸಂಜೆ 4:30ಕ್ಕೆ ಲೆಫ್ಟಿನೆಂಟ್‌ ವಿ.ಕೆ ಸಕ್ಸೇನಾ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆಯನ್ನು ಸಲ್ಲಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಭಾನುವಾರ, ಕೇಜ್ರಿವಾಲ್ ತಮ್ಮ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುವಾಗ ರಾಜೀನಾಮೆ ನೀಡುವ ನಿರ್ಧಾರ ಘೋಷಿಸಿದ್ದರು. “ನಾನು 2 ದಿನಗಳ ನಂತರ ರಾಜೀನಾಮೆ ನೀಡಲಿದ್ದೇನೆ. ನಾನು ಪ್ರಾಮಾಣಿಕನೇ ಎಂದು ಜನರನ್ನು ಕೇಳಿ. ಅವರು ಪ್ರತಿಕ್ರಿಯಿಸುವವರೆಗೂ ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ. ಜನರು ನನಗೆ ಪ್ರಾಮಾಣಿಕತೆಯ ಪ್ರಮಾಣಪತ್ರವನ್ನು ನೀಡಿದ ನಂತರವೇ ನಾನು ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೇನೆ. ಜೈಲಿನಿಂದ ಹೊರಬಂದ ನಂತರ ‘ಅಗ್ನಿಪರೀಕ್ಷೆ’ಗೆ ಒಳಪಡಲು ಬಯಸುತ್ತೇನೆ” ಎಂದು ನಾಯಕ ಹೇಳಿದ್ದರು.
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಸಲ್ಲಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ಪಡೆದ ನಂತರ ದೆಹಲಿಯ ತಿಹಾರ್ ಜೈಲಿನಿಂದ ಹೊರಬಂದ ಎರಡು ದಿನಗಳ ನಂತರ ಕೇಜ್ರಿವಾಲ್ ಈ ಘೋಷಣೆ ಮಾಡಿದ್ದಾರೆ.
ಇನ್ನು ಕೇಜ್ರಿವಾಲ್‌ ರಾಜೀನಾಮೆಯಿಂದ ತೆರವುಗೊಂಡಿರುವ ಸಿಎಂ ಸ್ಥಾನವನ್ನು ತುಂಬುವ ಮುಂದಿನ ಸಮರ್ಥ ನಾಯಕರು ಯಾರು ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿತ್ತು. ಹಲವು ಪ್ರಮುಖರ ಹೆಸರು ಚರ್ಚೆಯಲ್ಲಿದ್ದರೂ ಪಕ್ಷದಲ್ಲಿ ಅಲ್ಪಸಂಖ್ಯಾತ ವರ್ಗ ಮತ್ತು ಹಿಂದುಳಿದ ವರ್ಗಗಳ ಶಾಸಕರು ಹೆಚ್ಚಾಗಿ ಇರುವ ಕಾರಣ ಆ ಸಮುದಾಯದ ನಾಯಕರನ್ನೇ ಸಿಎಂ ಆಗಿ ನೇಮಿಸಬಹುದೆಂಬ ಚರ್ಚೆ ಎಲ್ಲೆಡೆ ಕೇಳಿ ಬಂದಿತ್ತು. ಇದೀಗ ತಮ್ಮ ಅಪ್ತೆ ಆತಿಶಿಯ ಹೆಸರನ್ನೇ ಕೇಜ್ರಿವಾಲ್‌ ಸಿಎಂ ಆಗಿ ಸೂಚಿಸಿದ್ದಾರೆ ಎನ್ನಲಾಗಿದೆ.
ಈ ಸುದ್ದಿಯನ್ನೂ ಓದಿ:  : ಮಂಗಳವಾರ  ಲೆಫ್ಟಿನೆಂಟ್‌ ಗವರ್ನರ್‌ ಭೇಟಿ ಮಾಡಲಿರುವ ಕೇಜ್ರಿವಾಲ್‌; ರಾಜೀನಾಮೆ ಸಾಧ್ಯತೆ