13,615 ಕೋವಿಡ್ ಪ್ರಕರಣ ದೃಢ
ನವದೆಹಲಿ: ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ ಕೋವಿಡ್ ದೃಢಪಟ್ಟ 13,615 ಪ್ರಕರಣಗಳು ದಾಖಲಾಗಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 1,31,043ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,25,474ಕ್ಕೆ ಏರಿದೆ. ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಶೇ.0.30 ರಷ್ಟು ಸಕ್ರಿಯ ಪ್ರಕರಣಗಳಿವೆ.
ದೈನಂದಿನ ಕೋವಿಡ್ ದೃಢ ಪ್ರಮಾಣ ಶೇ.3.23 ರಷ್ಟಿದ್ದು, ವಾರದ ಕೋವಿಡ್ ದೃಢ ಪ್ರಮಾಣ ಶೇ.4.24 ರಷ್ಟಿದೆ.