15,940 ಹೊಸ ಕೋವಿಡ್ ಪ್ರಕರಣ ದೃಢ
ನವದೆಹಲಿ: ಭಾರತದಲ್ಲಿ ಕರೋನಾ ಸೋಂಕು ಪ್ರಕರಣ ಮತ್ತಷ್ಟು ಹೆಚ್ಚಳವಾಗಿದೆ. ಶನಿವಾರ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 15,940 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿ, 20 ಮಂದಿ ಮೃತಪಟ್ಟಿದ್ದಾರೆ.
ಇದರೊಂದಿಗೆ ದೇಶದಲ್ಲಿ ಪ್ರಕರಣಗಳ ಒಟ್ಟು ಸಂಖ್ಯೆ 4,33,78,234ಕ್ಕೆ ಏರಿಕೆಯಾಗಿದೆ. ಅಲ್ಲದೇ, ಮೃತಪಟ್ಟವರ ಸಂಖ್ಯೆ 5,24,974ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 91,779ಕ್ಕೆ ಇಳಿಕೆ ಯಾಗಿದೆ.
ಕಳೆದ 24 ಗಂಟೆಗಳಲ್ಲಿ 12,425 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,27,61,481ಕ್ಕೆ  ತಲುಪಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,96,77,33,217 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.