 : 250 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ; ಅಪ್ಲೈ ಮಾಡುವ ವಿಧಾನ ಇಲ್ಲಿದೆ
ಬೆಂಗಳೂರು:ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (   )  ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (  2024). 250  ಡೆಪ್ಯುಟಿ ಮ್ಯಾನೇಜರ್‌ ( ) ಹುದ್ದೆ ಖಾಲಿ ಇದ್ದು, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್‌ 28 ( ).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಎಲೆಕ್ಟ್ರಿಕಲ್‌ ಎರೆಕ್ಷನ್‌- 45 ಹುದ್ದೆ, ವಿದ್ಯಾರ್ಹತೆ: ಪದವಿ, ಬಿ.ಇ ಅಥವಾ ಬಿ.ಟೆಕ್‌ ಇನ್‌ ಎಲೆಕ್ಟ್ರಿಕಲ್‌/ಎಲೆಕ್ಟ್ರಿಕಲ್‌ & ಎಲೆಕ್ಟ್ರಾನಿಕ್ಸ್‌ಮೆಕ್ಯಾನಿಕಲ್‌ ಎರೆಕ್ಷನ್‌-95 ಹುದ್ದೆ, ವಿದ್ಯಾರ್ಹತೆ: ಪದವಿ, ಬಿ.ಇ ಅಥವಾ ಬಿ.ಟೆಕ್‌ ಇನ್‌ ಮೆಕ್ಯಾನಿಕಲ್‌/ಪ್ರೊಡಕ್ಷನ್‌ಸಿ & ಐ ಎರೆಕ್ಷನ್‌- 35 ಹುದ್ದೆ, ವಿದ್ಯಾರ್ಹತೆ: ಪದವಿ, ಬಿ.ಇ ಅಥವಾ ಬಿ.ಟೆಕ್‌ ಇನ್‌ ಎಲೆಕ್ಟ್ರಾನಿಕ್ಸ್‌/ಕಂಟ್ರೋಲ್‌ ಇನ್‌ಸ್ಟ್ರುಮೆಂಟೇಶನ್‌/ಇನ್‌ಸ್ಟ್ರುಮೆಂಟೇಶನ್‌ಸಿವಿಲ್‌ ಕನ್‌ಸ್ಟ್ರಕ್ಷನ್‌-75 ಹುದ್ದೆ, ವಿದ್ಯಾರ್ಹತೆ: ಪದವಿ, ಬಿ.ಇ ಅಥವಾ ಬಿ.ಟೆಕ್‌ ಇನ್‌ ಸಿವಿಲ್‌/ಕನ್‌ಸ್ಟ್ರಕ್ಷನ್ಸ್‌
ವಯೋಮಿತಿ
  2024 ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ಗರಿಷ್ಠ ವಯಸ್ಸು 40 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಆಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ/ಮಾಜಿ ಯೋಧರು/ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ/ಇಡಬ್ಲ್ಯುಎಸ್‌/ಒಬಿಸಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 300 ರೂ. ಅನ್ನು ಆನ್‌ಲೈನ್‌ ಅಥವಾ ಆಫ್‌ಲೈನ್‌ ಮೂಲಕ ಪಾವತಿಸಬೇಕು.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಲಿಖಿತ/ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 70,000 ರೂ. – 2,00,000 ರೂ. ಮಾಸಿಕ ವೇತನ ದೊರೆಯಲಿದೆ.
  2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
ಅಪ್‌ಲೋಡ್‌ ಮಾಡಬೇಕಾದ ದಾಖಲೆಗಳು
ಹೆಚ್ಚಿನ ವಿವರಗಳಿಗೆ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ವೆಬ್‌ಸೈಟ್‌:..inಗೆ ಭೇಟಿ ನೀಡಿ.
ಈ ಸುದ್ದಿಯನ್ನೂ ಓದಿ: : BISನಲ್ಲಿದೆ ಉದ್ಯೋಗಾವಕಾಶ; 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ