4,518 ಕೋವಿಡ್ 19 ಸೋಂಕು ಪ್ರಕರಣ ದೃಢ
ನವದೆಹಲಿ:ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 4,518 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದೆ.
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 25,782ಕ್ಕೆ ಏರಿಕೆಯಾಗಿದೆ. 24ಗಂಟೆಯಲ್ಲಿ ಭಾರತದಲ್ಲಿ 1,730 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ.
ಒಂದೇ ದಿನದಲ್ಲಿ 2,779 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಒಟ್ಟು 4,26,30,852 ಮಂದಿ ಗುಣಮುಖರಾಗಿದ್ದಾರೆ ಎಂದು ಅಂಕಿಅಂಶ ವಿವರಿಸಿದೆ. ಭಾರತದಲ್ಲಿ ಕೋವಿಡ್ 19 ಚೇತರಿಕೆ ದರ ಶೇ.98.73ರಷ್ಟಿದೆ.