3,962 ಮಂದಿಗೆ ಹೊಸದಾಗಿ ಸೋಂಕು ದೃಢ
ನವದೆಹಲಿ :ದೇಶದಲ್ಲಿ ಶನಿವಾರ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 3,962 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ ಸೋಂಕಿನಿಂದ 26 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಮಹಾಮಾರಿಗೆ ಬಲಿಯಾದವರ ಸಂಖ್ಯೆ 524677 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,962 ಹೊಸ ಪ್ರಕರಣಗಳು, 2,697 ಚೇತರಿಕೆಗಳು ಮತ್ತು 26 ಸಾವುಗಳು ವರದಿಯಾಗಿವೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 22,416 ಕ್ಕೆ ಏರಿಕೆಯಾಗಿದೆ.