2,364 ಹೊಸ ಕೋವಿಡ್ ಸೋಂಕು ಪ್ರಕರಣ ಪತ್ತೆ
ನವದೆಹಲಿ:ಕಳೆದ 24ಗಂಟೆಯಲ್ಲಿ ಭಾರತದಲ್ಲಿ 2,364 ನೂತನ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದೆ.
ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,29,563ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 15,419ಕ್ಕೆ ಇಳಿಕೆಯಾಗಿದೆ. 24ಗಂಟೆಯಲ್ಲಿ ಕೋವಿಡ್ 19 ಸೋಂಕಿನಿಂದ 10 ಮಂದಿ ಮೃತಪಟ್ಟಿದ್ದಾರೆ.
ದೇಶಾದ್ಯಂತ ಈವರೆಗೆ ಕೋವಿಡ್ ಗೆ ಬಲಿಯಾದವರ ಒಟ್ಟು ಸಂಖ್ಯೆ 5,24,303ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 228 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ.
ದೇಶಾದ್ಯಂತದ ಕೋವಿಡ್ 19 ಲಸಿಕೆ ಅಭಿಯಾನದಲ್ಲಿ 191.79 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.