3,451 ಕೋವಿಡ್ ಪ್ರಕರಣ ಪತ್ತೆ
ನವದೆಹಲಿ: ಭಾರತದಲ್ಲಿ ಕರೋನಾ ಸೋಂಕು ಮತ್ತೆ ಏರಿಕೆಯಾಗಿದೆ.
ಭಾನುವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 3,451 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 40 ಮಂದಿ ಮೃತಪಟ್ಟಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,02,194ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ ಮೃತಪಟ್ಟ ವರ ಸಂಖ್ಯೆ 5,24,064ಕ್ಕೆ ಏರಿಕೆಯಾಗಿದೆ.  ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 20,635ಕ್ಕೆ ಇಳಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 3,079 ಮಂದಿ ಗುಣಮುಖರಾಗುವುದರೊಂದಿಗೆ ಚೇತರಿಸಿಕೊಂಡವರ ಸಂಖ್ಯೆ 4,25,57,495ಕ್ಕೆ ತಲುಪಿದೆ. ಲಸಿಕೆ ಅಭಿಯಾನ ಆರಂಭ ವಾಗಿ ಇಲ್ಲಿಯವರೆಗೂ 1,90,20,07,487 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.