3,805 ಕೋವಿಡ್ 19 ಸೋಂಕು ಪ್ರಕರಣ ದೃಢ
ನವದೆಹಲಿ:ಕಳೆದ 24ಗಂಟೆಯಲ್ಲಿ ಭಾರತದಲ್ಲಿ 3,805 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದೆ. ಅಲ್ಪ ಪ್ರಮಾಣದ ಹೆಚ್ಚಳ ಕಂಡಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಮೇ 07) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ದೇಶಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಒಟ್ಟು 4,30,98,743ಕ್ಕೆ ಏರಿಕೆಯಾಗಿದೆ. 24 ಗಂಟೆಯ ಅವಧಿಯಲ್ಲಿ 22 ಮಂದಿ ಕೋವಿಡ್ ಸೋಂಕಿನಿಂದ ಮೃತ ಪಟ್ಟಿದ್ದು, ಇದರೊಂದಿಗೆ ಮೃತರ ಸಂಖ್ಯೆ 5,24,024ಕ್ಕೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ 3,168 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ದೇಶಾದ್ಯಂತ ಒಟ್ಟು 4,25,54,416 ಮಂದಿ ಗುಣಮುಖರಾಗಿದ್ದಾರೆ.
24 ಗಂಟೆಯಲ್ಲಿ 4,87,544 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.