3,275 ಕೋವಿಡ್ 19 ಪ್ರಕರಣಗಳು ದೃಢ
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 3,275 ಕೋವಿಡ್ 19 ಪ್ರಕರಣಗಳು ದೃಢಪಟ್ಟಿದೆ.
ದೇಶದಲ್ಲಿನ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 4,30,91,393ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಬಿಡುಗಡೆಗೊಳಿಸಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 19,719ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ 55 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಒಂದೇ ದಿನದಲ್ಲಿ 3,010 ಮಂದಿ ಕೋವಿಡ್ ನಿಂದ ಚೇತರಿಸಿ ಕೊಂಡಿದ್ದು, ದೇಶಾದ್ಯಂತ ಈವರೆಗೆ 4,25,47,699 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ಪ್ರತಿದಿನದ ಪಾಸಿಟಿವಿಟಿ ದರ ಶೇ.0.77ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.0.78ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ. ಭಾರತದಲ್ಲಿನ ಕೋವಿಡ್ ಲಸಿಕೆ ಅಭಿಯಾನದಲ್ಲಿ ಈವರೆಗೆ 189.63 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.
ಒಂದೇ ದಿನದಲ್ಲಿ ದೇಶಾದ್ಯಂತ ಒಟ್ಟು 4,23,430 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.