ದೋಷಪೂರಿತ ವಾಹನ ಹಿಂಪಡೆಯಿರಿ: ಸಚಿವ ಗಡ್ಕರಿ ಎಚ್ಚರಿಕೆ
ನವದೆಹಲಿ:ಎಲೆಕ್ಟ್ರಿಕ್ ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ಹಾಗೂ ಬ್ಯಾಟರಿ ಸ್ಫೋಟ ಗೊಳ್ಳುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರವು,  ದೋಷಪೂರಿತ ವಾಹನಗಳನ್ನು ಹಿಂಪಡೆಯುವಂತೆ ಕಂಪನಿಗಳಿಗೆ ಎಚ್ಚರಿಕೆ ನೀಡಿದ್ದು, ದಂಡ ವಿಧಿಸುವುದಾಗಿ ಹೇಳಿದೆ.
ಘಟನೆಗಳ ಬಗ್ಗೆ ತನಿಖೆ ನಡೆಸಲು ಮತ್ತು ಭವಿಷ್ಯದಲ್ಲಿ ಇಂತಹ ಪ್ರಕರಣಗಳು ಸಂಭವಿಸದಂತೆ ತಡೆಯಲು/ ಶಿಫಾರಸುಗಳನ್ನು ಮಾಡಲು ರಸ್ತೆ ಸಾರಿಗೆ ಸಚಿವಾಲಯ ಈಗಾಗಲೇ ತಜ್ಞರ ತಂಡವನ್ನು ರಚಿಸಿದೆ.