ಕೋವಿಡ್ 19: 2,451 ಪ್ರಕರಣ ಪತ್ತೆ
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,451 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 14,241ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾ ಲಯ ಶುಕ್ರವಾರ ಅಂಕಿಅಂಶದಲ್ಲಿ ತಿಳಿಸಿದೆ. ಕಳೆದ ಮೂರು ದಿನಗಳಿಂದ ದೇಶದಲ್ಲಿ 2,000ಕ್ಕಿಂತ ಅಧಿಕ ಕೋವಿಡ್ ಪ್ರಕರಣಗಳು ವರದಿಯಾಗುತ್ತಿದೆ.
24ಗಂಟೆಯಲ್ಲಿ 808 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾದ ಪರಿಣಾಮ ಶುಕ್ರವಾರ ಕೋವಿಡ್ ಪ್ರಕರಣಗಳ ಸಂಖ್ಯೆ ಒಟ್ಟು 14,241ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶ ತಿಳಿಸಿದೆ.
ಇದರೊಂದಿಗೆ ದೇಶಾದ್ಯಂತ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,22,116ಕ್ಕೆ ಏರಿಕೆಯಾಗಿದೆ. ಭಾರತ ದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,52,425ಕ್ಕೆ ಹೆಚ್ಚಳವಾಗಿದೆ ಎಂದು ಸಚಿವಾಲಯ ಹೇಳಿದೆ.