2,380 ಕೋವಿಡ್ ಪ್ರಕರಣ ಪತ್ತೆ
ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ಸೋಂಕು ಏರಿಳಿಯುತ್ತಿದ್ದು, ದೇಶದಲ್ಲಿ ಬುಧವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,380 ಕೋವಿಡ್ ಪ್ರಕರಣಗಳು ಪತ್ತೆಯಾಗಿ, 56 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,49,974ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,22,062ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 13,433ಕ್ಕೆ ಇಳಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 1,231 ಮಂದಿ ಗುಣಮುಖರಾಗುವುದರೊಂದಿಗೆ, ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,14,479ಕ್ಕೆ ತಲುಪಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,87,07,08,111 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.