1,088 ಕೋವಿಡ್ ಪ್ರಕರಣಗಳು ಪತ್ತೆ
ನವದೆಹಲಿ: ಭಾರತದಲ್ಲಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದ್ದು, ಬುಧವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 1,088 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 26 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,38,016ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,21,736ಕ್ಕೆ ಏರಿಕೆಯಾಗಿದೆ.
ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10,870ಕ್ಕೆ ಇಳಿಕೆಯಾಗಿದೆ. ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,05,410ಕ್ಕೆ ತಲುಪಿದೆ.
ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,85,90,68,616 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.