796 ಹೊಸ ಕೋವಿಡ್ ಪ್ರಕರಣಗಳು ಪತ್ತೆ
ನವದೆಹಲಿ:ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 796 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 19 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆ 4,30,36,928ಕ್ಕೆ ಏರಿಕೆಯಾಗಿದೆ.
ಸದ್ಯ 10,889 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇ 0.20 ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕೇರಳದಲ್ಲಿ 2,965, ಕರ್ನಾಟಕದಲ್ಲಿ 1,488, ಮಹಾರಾಷ್ಟ್ರದಲ್ಲಿ 732, ದೆಹಲಿಯಲ್ಲಿ 601 ಸಕ್ರಿಯ ಪ್ರಕರಣಗಳಿವೆ.