ಇಡಿ ವಿಚಾರಣೆಗೆ ಮಲ್ಲಿಕಾರ್ಜುನ ಖರ್ಗೆ ಹಾಜರು
ನವದೆಹಲಿ:ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾದರು.
ನ್ಯಾಷನಲ್​ ಹೆರಾಲ್ಡ್​ ಭಷ್ಟಾಚಾರ ಪ್ರಕರಣದ ಅಡಿಯಲ್ಲಿ ಇಡಿ ಮಲ್ಲಿಕಾ ರ್ಜುನ ಖರ್ಗೆಯವರನ್ನು ವಿಚಾರಣೆಗೆ ಒಳಪಡಿಸಿದೆ.
ಭಷ್ಟ್ರಾಚಾರ ಪ್ರಕರಣದಲ್ಲಿ ಕಾಂಗ್ರೆಸ್​ ಹಿರಿಯ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್​ ನಾಯಕರಿಗೆ  ಸಂಕಷ್ಟ ಎದುರಾಗಿದೆ.
ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್​ ಹಿರಿಯ ನಾಯಕ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್​ ನೀಡಿತ್ತು. ಅದರಂತೆ ದೆಹಲಿಯ ಇಡಿ ಕಚೇರಿಗೆ ಖರ್ಗೆ ಹಾಜರಾದರು.