1,033 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ
ನವದೆಹಲಿ:ಸಾವಿರಕ್ಕೂ ಅಧಿಕ ಕೋವಿಡ್ ಕೇಸ್ ಗಳು ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಮತ್ತೆ  ದಾಖಲಾಗಿದ್ದು, 1,033 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 43 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 5,21,530 ಕ್ಕೆ ಏರಿಕೆಯಾಗಿದೆ.
ಇನ್ನು 11,639 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,222 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,24,98,789 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 1,85,20,72,469 ಡೋಸ್ ಲಸಿಕೆ ಹಾಕಲಾಗಿದೆ.