ಪೂಂಚ್: ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವು
ಶ್ರೀನಗರ: ಗುರುವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ  ಸಂಭವಿಸಿದ ರಸ್ತೆ ಅಪಘಾತದಲ್ಲಿ 7 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.
ಬುಲಿಯಾಜ್‌ನಿಂದ ಸುರನ್‌ಕೋಟೆಗೆ ಮದುವೆ ಸಮಾರಂಭಕ್ಕಾಗಿ ಅತಿಥಿಗಳನ್ನು ಕರೆದೊಯ್ಯುತ್ತಿದ್ದ ಟಾಟಾ ಸುಮೊ ವಾಹನವು ಟರ್ರನ್ ವಾಲಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.
ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ತಂಡ ಸ್ಥಳಕ್ಕೆ ದೌಡಾಯಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ’ ಎಂದು ಮೂಲಗಳು ತಿಳಿಸಿವೆ.