10,273 ಕೋವಿಡ್ ಪ್ರಕರಣಗಳು ಪತ್ತೆ, 243 ಮಂದಿ ಸಾವು
ನವದೆಹಲಿ: ದೇಶದಾದ್ಯಂತ ಕರೋನಾ ವೈರಸ್ ಹಾವಳಿ ಮತ್ತಷ್ಟು ಇಳಿಕೆಯಾಗಿದೆ.
ಭಾನುವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 10,273 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 243 ಮಂದಿ ಮೃತಪಟ್ಟಿದ್ದಾರೆ.
ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,29,16,117ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಮೃತಪಡುವವರ ಸಂಖ್ಯೆ 5,13,724ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,11,472ಕ್ಕೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ 20,439 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,22,70,482ಕ್ಕೆ ತಲುಪಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,77,44,08,129 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.